ವಿಜಯಪುರ:- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜ್ಯ ಸಚಿವ ಶಿವಾನಂದ ಪಾಟೀಲ್ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ್ ಅವರು ಇಂದು ನಸುಕಿನಜಾವ ನಿಧರಾಗಿದ್ದಾರೆ.
ಮೃತ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ್ ಅವರು ಮಕ್ಕಳಾದ ಮಹಾದೇವಿ ಪಾಟೀಲ, ಶಿವಶರಣಗೌಡ ಪಾಟೀಲ, ಶಿವಾನಂದ ಪಾಟೀಲ ಹಾಗೂ ವಿಜುಗೌಡ ಪಾಟೀಲ ಸೇರಿದಂತೆ ಮೊಮ್ಮಕ್ಕಳು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯ ಕ್ರಿಯೆ ಇಂದು ಸಂಜೆ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದಲ್ಲಿ ನೆರವೇರಿದೆ. ಗಂಗಾಬಾಯಿ ಸಿದ್ದರಾಮಪ್ಪ ಪಾಟೀಲ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸೇರಿ ಹಲವು ಕ್ಷೇತ್ರದ ಮುಖಂಡರು ಸಂತಾಪ ಸೂಚಿಸಿದ್ದಾರೆ.



