ಬೆಂಗಳೂರು : ನಗರದ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಹೊಸ ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ ಪವಿತ್ರ ಎಂಬ ಮಹಿಳೆಯು ಸಲ್ಲಿಸಿದ ದೂರಿನ ಆಧಾರದ ಮೇಲೆ ದಾಖಲಾಗಿದ್ದು, ಈ ಮೂಲಕ ಮುಡಾ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಟ್ವಿಸ್ಟ್ ಸಿಕ್ಕಿದೆ.
ಪವಿತ್ರ ಕೊಟ್ಟ ದೂರಿನಲ್ಲಿ ಏನಿದೆ?
“ನನ್ನ ಮೇಲೆ ಬೆದರಿಕೆ ಹಾಕಲಾಗುತ್ತಿದ್ದು, ಪ್ರೊ. ಮೈಲಾರಪ್ಪ ವಿರುದ್ಧ ಕೊಟ್ಟಿರುವ ದೂರು ವಾಪಸ್ ಪಡೆಯುವಂತೆ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ, ಪೊಲೀಸರವರು ಸ್ನೇಹಿಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ ದಾಖಲಿಸಿಕೊಂಡಿದ್ದಾರೆ.
ಸದ್ಯ ತನಿಖೆ ನಡೆಯುತ್ತಿದೆ. ಮುಡಾ ಹಗರಣದ ದೂರು ಸಂಬಂಧಿತ ಪ್ರಕರಣಗಳಲ್ಲಿ ಸ್ಥಳೀಯರು ಮತ್ತು ಸಾಮಾಜಿಕ ಕಾರ್ಯಕರ್ತರ ನಡುವಿನ ವಾದ-ವಿವಾದಗಳು ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಈ ಪ್ರಕರಣ ಹೊಸ ತಿರುವು ತಂದುಕೊಟ್ಟಿದೆ.
ಈ ಮೂಲಕ ಮುಡಾ ಹಗರಣ ಸಂಬಂಧಿತ ಪ್ರಕರಣಗಳಲ್ಲಿ ಮುಂದಿನ ಹಂತದ ತನಿಖೆಗೂ ಮರುಬಲ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.



