ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿ ಭೀಕರ ಬಸ್ ಅಪಘಾತ ಸಂಭವಿಸಿದೆ.
ಕೆ.ಆರ್.ಪೇಟೆ ನಗರದಿಂದ ಭೇರ್ಯ ಕಡೆಗೆ ಹೋಗುತ್ತಿದ್ದ KSRTC ಬಸ್‌ನ ಬ್ರೇಕ್ ಫೇಲ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರೈಲಿಂಗ್ಸ್‌ಗೆ ಡಿಕ್ಕಿ ಹೊಡೆದಿದೆ.
ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್ 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



