ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯದಲ್ಲಿ ಗುರುವೈಭವೋತ್ಸವ ಸಂಭ್ರಮದಿಂದ ನಡೆಯಿತು. ತಿರುಮಲ ತಿರುಪತಿ ದೇವಸ್ಥಾನದಿಂದ ಮಂತ್ರಾಲಯಕ್ಕೆ ತರಲಾದ ಶ್ರೀನಿವಾಸ ದೇವರ ಶೇಷವಸ್ತ್ರವನ್ನು ರಾಯರ ಬೃಂದಾವನಕ್ಕೆ ಭಕ್ತಿಭಾವದಿಂದ ಸಮರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಭಾಗವಹಿಸಿದ್ದರು.
ತಿರುಮಲ ತಿರುಪತಿ ದೇವಸ್ಥಾನದ ಅಧಿಕಾರಿಗಳನ್ನು ರಾಯರ ಮಠದ ಆಡಳಿತ ಮಂಡಳಿ ಸಾಂಪ್ರದಾಯಿಕವಾಗಿ ಸ್ವಾಗತಿಸಿತು. ಬಳಿಕ ಮೆರವಣಿಗೆಯ ಮೂಲಕ ಶೇಷವಸ್ತ್ರವನ್ನು ಮಠಕ್ಕೆ ತರಲಾಗಿದ್ದು, ರಾಯರ ಮೂಲ ಬೃಂದಾವನದಲ್ಲಿ ಸಮರ್ಪಣೆ ನೆರವೇರಿಸಲಾಯಿತು.
ಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಶೇಷವಸ್ತ್ರವನ್ನು ಸಮರ್ಪಿಸಿದರು. ಈ ವೇಳೆ ಅನೇಕ ಭಕ್ತರು ಉಪಸ್ಥಿತರಿದ್ದು, ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನೆರವೇರಿತು.



