ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಂ.ಫಾರ್ಮಾ ಕೋರ್ಸ್ ಪ್ರವೇಶ ಎರಡನೇ ಮತ್ತು ಅಂತಿಮ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಫೆ.25ರಂದು ಮಧ್ಯಾಹ್ನ 2 ಗಂಟೆಯೊಳಗೆ ವಿದ್ಯಾರ್ಥಿಗಳು ತಮ್ಮ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಫೆ.25ರಂದು ಸಂಜೆ 8 ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದ್ದು, ಫೆ.26ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟವಾಗಲಿದೆ. ಸೀಟು ಹಂಚಿಕೆಗೊಳ್ಳುವ ವಿದ್ಯಾರ್ಥಿಗಳು ಫೆ.27ರಿಂದ ಮಾರ್ಚ್ 4ರವರೆಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರಗಳನ್ನು ಪಡೆಯಬೇಕು. ನಂತರ, ಮಾರ್ಚ್ 5ರೊಳಗೆ ತಮ್ಮ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು.
ಮಹತ್ವದ ಸೂಚನೆ: ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೆ ಎರಡನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇದುವರೆಗೆ ಯಾವುದೇ ಸೀಟು ಹಂಚಿಕೆಯಾಗದ ಅಥವಾ ಈಗಾಗಲೇ ಕಾಲೇಜಿನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಎರಡನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳಿಗೆ ಆಯ್ಕೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ KEA ವೆಬ್ಸೈಟ್ ಪರಿಶೀಲಿಸುವಂತೆ ತಿಳಿಸಲಾಗಿದೆ.



