ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ದುರಂತ ಸಂಭವಿಸಿದೆ.
ಮದುವೆ ಮಂಟಪದಲ್ಲಿ ಆರತಕ್ಷತೆ ಫೋಟೋಗಳನ್ನು ತೆಗೆಯುತ್ತಿದ್ದ ಯುವ ಫೋಟೋಗ್ರಾಫರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಎಂಬ ಫೋಟೋಗ್ರಾಫರ್, ಕಾರ್ಯನಿರ್ವಹಿಸುತ್ತಿದ್ದ ವೇಳೆ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳವು ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡುತ್ತಿದೆ. ಘಟನೆ ಕುರಿತು ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಫೋಟೋಗ್ರಾಫರ್ ಸಾವಿನಿಂದ ಮದುವೆ ಮನೆಯಲ್ಲಿ ಶೋಕದ ಛಾಯೆ ಆವರಿಸಿದೆ.



