HomeIndia Newsಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಹೆಸರಿಲ್ಲ: ಕೇರಳ ಸಚಿವ ಸಂಪುಟ ತೀರ್ಮಾನ

ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಹೆಸರಿಲ್ಲ: ಕೇರಳ ಸಚಿವ ಸಂಪುಟ ತೀರ್ಮಾನ

For Dai;y Updates Join Our whatsapp Group

Spread the love

ಕೇರಳ: ಇನ್ನು ಮುಂದೆ ಕೇರಳದಲ್ಲಿ ಸರ್ಕಾರದಿಂದ ನಡೆಸಲ್ಪಡುವ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳು ಹಾಗೂ ಇತರೆ ಶಿಕ್ಷಣ ಸಂಸ್ಥೆಗಳಿಗೆ ಧರ್ಮವನ್ನು ಸೂಚಿಸುವ ಹೆಸರಿಡಲು ಅವಕಾಶ ಇರುವುದಿಲ್ಲ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸರ್ಕಾರ ನಡೆಸುವ ಶಿಕ್ಷಣ ಸಂಸ್ಥೆಗಳು ಜಾತ್ಯತೀತ ಸ್ವಭಾವವನ್ನು ಕಾಪಾಡಿಕೊಳ್ಳಬೇಕು. ಸಮಾನತೆ ಹಾಗೂ ಎಲ್ಲರನ್ನು ಒಳಗೊಂಡಿರುವ ಸಾಂವಿಧಾನಿಕ ಮೌಲ್ಯಗಳನ್ನು ಪ್ರತಿಬಿಂಬಿಸಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ತೀರ್ಮಾನವು ಭವಿಷ್ಯದಲ್ಲಿ ಸ್ಥಾಪನೆಯಾಗುವ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಅನ್ವಯವಾಗಲಿದೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಹೆಸರಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸರ್ಕಾರಿ ಮೂಲಗಳು ಸ್ಪಷ್ಟಪಡಿಸಿವೆ.

ಈ ಸಂಬಂಧ ನ್ಯಾ. ಜೆ.ಬಿ.ಕೋಶಿ ಅವರ ನೇತೃತ್ವದ ಆಯೋಗ ಸಲ್ಲಿಸಿದ ವರದಿಯನ್ನು ಸಚಿವ ಸಂಪುಟ ತಾತ್ವಿಕವಾಗಿ ಅಂಗೀಕರಿಸಿದೆ. ಕೇರಳದಲ್ಲಿನ ಕ್ರಿಶ್ಚಿಯನ್ ಅಲ್ಪಸಂಖ್ಯಾತರ ಶೈಕ್ಷಣಿಕ ಹಾಗೂ ಆರ್ಥಿಕ ಹಿಂದುಳಿದಿರುವಿಕೆ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿಚಾರಗಳ ಅಧ್ಯಯನಕ್ಕಾಗಿ ಕೋಶಿ ಆಯೋಗವನ್ನು ಸರ್ಕಾರ ರಚಿಸಿತ್ತು.

ಇದೇ ವೇಳೆ, ಕೇರಳಕ್ಕೆ ಸಂಬಂಧಿಸಿದ ಮತ್ತೊಂದು ಮಹತ್ವದ ಬೆಳವಣಿಗೆಯೂ ನಡೆದಿದೆ. ಕೇರಳ ರಾಜ್ಯದ ಹೆಸರು ಇನ್ನು ಮುಂದೆ ‘ಕೇರಳಂ’ ಎಂದು ಅಧಿಕೃತವಾಗಿ ಕರೆಯಲ್ಪಡಲಿದೆ. ಈ ಸಂಬಂಧ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪ್ರಧಾನಿ Narendra Modi ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಇದಕ್ಕೆ ಒಪ್ಪಿಗೆ ನೀಡಿದೆ. ಪರಿಣಾಮವಾಗಿ, ಮುಂದಿನ ದಿನಗಳಲ್ಲಿ ರಾಜ್ಯದ ಅಧಿಕೃತ ಹೆಸರು ‘ಕೇರಳಂ’ ಆಗಲಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!