ಚಿತ್ರದುರ್ಗ: ಅನ್ಯ ಕೋಮಿನ ಯುವಕನಿಂದ ನಡೆದ ಚಾಕು ಇರಿತ ಪ್ರಕರಣದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ನಗರದ ಸಂತೇ ಮೈದಾನದ ಸಮೀಪದ ಮೊಬೈಲ್ ಅಂಗಡಿಯಲ್ಲಿ ಮೊಬೈಲ್‌ಗೆ ಸ್ಕ್ರೀನ್ ಗಾರ್ಡ್ ಅಳವಡಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಅದು ತೀವ್ರಗೊಂಡು ಚಾಕು ಇರಿತಕ್ಕೆ ತಿರುಗಿದೆ.
ಘಟನೆಯಲ್ಲಿ ಅಂಗಡಿ ಮಾಲೀಕ ವಿಕ್ರಮ್ ಚೌದ್ರಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುವಿನ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಸ್ಕ್ರೀನ್ ಗಾರ್ಡ್ ವಿಚಾರದಲ್ಲಿ ಉಂಟಾದ ವಾಗ್ವಾದದ ಹಿನ್ನೆಲೆಯಲ್ಲಿ ಅನ್ಯ ಕೋಮಿನ ಯುವಕ ಅಂಗಡಿ ಮಾಲೀಕನಿಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಚಾಕು ಇರಿತದ ದೃಶ್ಯಗಳು ಅಂಗಡಿಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.



