ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಸಮಾರಂಭ ಭಾರಿ ಗಮನ ಸೆಳೆದಿದೆ. ರಾಜಸ್ಥಾನದ ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ಇಂದು ಬೆಳಗ್ಗೆ ಈ ಜೋಡಿ ಅಧಿಕೃತವಾಗಿ ವಿವಾಹವಾಗಿದ್ದಾರೆ.
ಕುಟುಂಬದ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ನಡೆದ ವಿವಾಹವು ತೆಲುಗು ಸಂಪ್ರದಾಯದಂತೆ ನೆರವೇರಿತು. ಕಳೆದ ವರ್ಷ ನಡೆದ ನಿಶ್ಚಿತಾರ್ಥದ ನಂತರ ಈ ಜೋಡಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದೆ. ಮದುವೆಗೆ ಮುನ್ನ ಮೆಹಂದಿ, ಹಳದಿ ಮತ್ತು ಸಂಗೀತ್ ಕಾರ್ಯಕ್ರಮಗಳು ನಡೆಯುವ ಮೂಲಕ ಮದುವೆ ಸಂಭ್ರಮ ಆರಂಭವಾಗಿತ್ತು.
ಈ ಜೋಡಿ ವಿಭಿನ್ನ ಸಂಪ್ರದಾಯಗಳಿಗೆ ಸೇರಿದ ಕುಟುಂಬಗಳಿಂದ ಬಂದಿರುವ ಕಾರಣ, ತೆಲುಗು ಮತ್ತು ಕೊಡವ ಸಂಪ್ರದಾಯಗಳನ್ನು ಸಮನಾಗಿ ಪಾಲಿಸುವ ರೀತಿಯಲ್ಲಿ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಂಜೆ ವೇಳೆಗೆ ಕೊಡವ ಸಂಪ್ರದಾಯದ ಶಾಸ್ತ್ರಗಳು ನಡೆಯುವ ನಿರೀಕ್ಷೆಯಿದೆ.
ಚಿತ್ರರಂಗ ಮತ್ತು ರಾಜಕೀಯ ವಲಯದ ಗಣ್ಯರು ಭಾಗವಹಿಸುವ ನಿರೀಕ್ಷೆಯಿದ್ದು, ಮಾರ್ಚ್ ಮೊದಲ ವಾರದಲ್ಲಿ ಹೈದರಾಬಾದ್‌ನಲ್ಲಿ ಭರ್ಜರಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.



