70ನೇ ಫಿಲ್ಮ್‌ಫೇರ್ ಪ್ರಶಸ್ತಿ ಸಮಾರಂಭವು ಲಂಕೇಶ್ ಕುಟುಂಬಕ್ಕೆ ಮತ್ತೊಮ್ಮೆ ಗೌರವ ತಂದಿದೆ. ಸಮರ್ಜಿತ್ ಲಂಕೇಶ್ ಅವರು ‘ಗೌರಿ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನವನಟ ಪ್ರಶಸ್ತಿ ಗೆದ್ದು ಕುಟುಂಬದ ಸಾಧನೆಯನ್ನು ಮುಂದುವರಿಸಿದ್ದಾರೆ.
ಕನ್ನಡ ಸಾಹಿತ್ಯ ಹಾಗೂ ಚಿತ್ರರಂಗದಲ್ಲಿ ವಿಶಿಷ್ಟ ಗುರುತು ಮೂಡಿಸಿದ ಪಿ. ಲಂಕೇಶ್ ಅವರು ಎಲ್ಲಿಂದಲೋ ಬಂದವರು ಚಿತ್ರದ ಮೂಲಕ ಫಿಲ್ಮ್‌ಫೇರ್ ಗೌರವ ಪಡೆದಿದ್ದರು. ಅವರ ಪುತ್ರ ಇಂದ್ರಜಿತ್ ಲಂಕೇಶ್ ನಿರ್ದೇಶನ ಕ್ಷೇತ್ರದಲ್ಲಿ ‘ಐಶ್ವರ್ಯ’ ಚಿತ್ರದಿಗಾಗಿ ಫಿಲ್ಮ್‌ಫೇರ್ ಪ್ರಶಸ್ತಿ ಪಡೆದಿದ್ದರು.
ಈಗ ಸಮರ್ಜಿತ್ ಲಂಕೇಶ್ ‘ಗೌರಿ’ ಮೂಲಕ ಯಶಸ್ವಿ ಆರಂಭ ಮಾಡಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ವೃಷಭ ಚಿತ್ರದಲ್ಲಿ ಮೋಹನ್ಲಾಲ್ ಜೊತೆ ಅಭಿನಯಿಸಿದ್ದು ಅವರ ಕರಿಯರ್‌ಗೆ ಹೊಸ ಆಯಾಮ ನೀಡಿದೆ. ಒಂದು ಕನ್ನಡ ಹಾಗೂ ಒಂದು ಹಿಂದಿ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಅಧಿಕೃತ ಮಾಹಿತಿ ಹೊರಬೀಳಲಿದೆ.
ಲಂಕೇಶ್ ಕುಟುಂಬದ ಚಿತ್ರಯಾನ ಮೂರನೇ ತಲೆಮಾರಿನೊಂದಿಗೆ ಮತ್ತಷ್ಟು ಬಲ ಪಡೆಯುತ್ತಿದೆ.



