ಮಂಡ್ಯ: ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ನಗರದ ಹರಿಪ್ರಿಯ ಹೊಟೇಲ್‌ನಲ್ಲಿ ನಡೆದಿದೆ. ಕೆ.ಆರ್.ನಗರ ಮೂಲದ ಸುಖದೇವ್ (53) ಆತ್ಮಹತ್ಯೆಗೆ ಶರಣಾದ ವೈದ್ಯನಾಗಿದ್ದು,
ಮೈಸೂರಿನ ಖಾಸಗಿ ಕ್ಲಿನಿಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ನಗರದಲ್ಲಿರುವ ಹರಿಪ್ರಿಯ ಹೊಟೇಲ್‌ನಲ್ಲಿ ರೂಂ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾಗ ಮದ್ಯ ಸೇವನೆ ಮಾಡಿ, 30 ಮಾತ್ರೆಗಳ ಔಷಧ ಸೇವಿಸಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಶವವನ್ನು ವಶಕ್ಕೆ ಪಡೆದು ಮಿಮ್ಸ್ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಮುಂದಿನ ಕ್ರಮಗಳನ್ನು ಪೊಲೀಸರು ಕೈಗೊಳ್ಳುತ್ತಿದ್ದಾರೆ.



