ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು 55ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ, ಗುರುವಂದನಾ, ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ, ಧನ್ಯತಾ ಸಮಾರಂಭದಲ್ಲಿ ರಾಜ್ಯ ಮಟ್ಟದ ಉತ್ತಮ ಸಾಧಕ ಶಿಕ್ಷಕಿಗೆ ಕೊಡಮಾಡುವ `ಸಾವಿತ್ರಿಬಾಯಿ ಫುಲೆ ಪ್ರಶಸ್ತಿ’ಯನ್ನು ಮುಳಗುಂದ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಸಹ ಶಿಕ್ಷಕಿ ಶೋಭಾ ಪಾಟೀಲ ಅವರಿಗೆ ನೀಡಿ ಸನ್ಮಾನಿಸಲಾಗುವುದು ಎಂದು ಶಾಲಾ ಪ್ರಧಾನ ಗುರು ಪಿ.ಎಸ್. ಮರಿದೇವರಮಠ ತಿಳಿಸಿದ್ದಾರೆ.



