ಜನಪ್ರಿಯ ನಟ ದಳಪತಿ ವಿಜಯ್ ಅವರ ವೈಯಕ್ತಿಕ ಜೀವನ ಇದೀಗ ಭಾರಿ ಸುದ್ದಿಯಾಗುತ್ತಿದೆ. ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ದೃಢಪಟ್ಟಿದ್ದು, ಕುಟುಂಬದಲ್ಲಿ ಭಿನ್ನಾಭಿಪ್ರಾಯದ ಚರ್ಚೆ ಹೆಚ್ಚಾಗಿದೆ.
ಸಂಗೀತಾ ಅವರು ವಿಜಯ್ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದಾರೆ ಎಂಬ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಆರೋಪಗಳು ವಿಜಯ್ ಅವರ ರಾಜಕೀಯ ಭವಿಷ್ಯಕ್ಕೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ವಿಜಯ್ ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, ನಟನೆಯಿಂದ ನಿಧಾನವಾಗಿ ದೂರ ಸರಿಯುತ್ತಿದ್ದಾರೆ.
ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. 1999ರಲ್ಲಿ ವಿವಾಹವಾದ ಈ ದಂಪತಿ 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುವ ಸಾಧ್ಯತೆ ಇದೆ. ಅಭಿಮಾನಿಗಳು ಈ ಬೆಳವಣಿಗೆಯನ್ನು ಕುತೂಹಲದಿಂದ ಗಮನಿಸುತ್ತಿದ್ದಾರೆ.



