ಮೈಸೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾದ ನಂಜನಗೂಡು ನಂಜುಂಡೇಶ್ವರ ದೇವಸ್ಥಾನದ ದಾಸೋಹ ಭವನದ ದ್ವಾರದ ಬಳಿ ಸ್ಥಳೀಯ ವ್ಯಾಪಾರಿಯೊಬ್ಬರು ಮಾಂಸಾಹಾರ ಸೇವಿಸಿರುವ ಘಟನೆ ಬೆಳಕಿಗೆ ಬಂದಿದೆ.
ಹೂವಿನ ವ್ಯಾಪಾರಿ ಪ್ರದೀಪ್ ಎಂಬಾತ ದೇವಸ್ಥಾನದ ಆವರಣದ ಸಮೀಪದಲ್ಲೇ ಮಾಂಸಾಹಾರ ಸೇವಿಸಿದ್ದಾನೆ ಎಂದು ತಿಳಿದುಬಂದಿದೆ. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ತಕ್ಷಣವೇ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಭದ್ರತಾ ಸಿಬ್ಬಂದಿ ಪ್ರದೀಪ್‌ಗೆ ತರಾಟೆ ತೆಗೆದುಕೊಂಡ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.



