ನೆಲಮಂಗಲ:- ಮಾದನಾಯಕನಹಳ್ಳಿಯ ಅರೆಕೆತ್ತನಹಳ್ಳಿಯಲ್ಲಿ ಹೃದಯಾಘಾತದಿಂದ ನವವಿವಾಹಿತ ಸಾವನ್ನಪ್ಪಿದ ಘಟನೆ ಜರುಗಿದೆ.
ಚರಣ್ (30) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಚರಣ್ ಅವರ ಮದುವೆ ಮೂರು ತಿಂಗಳ ಹಿಂದೆ ನಡೆದಿತ್ತು. ಇಂದು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಈ ವೇಳೆ ಮನೆಯಲ್ಲೇ ಅವರು ಕುಸಿದು ಬಿದ್ದಿದ್ದರು.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದನ್ನು ಧೃಢಪಡಿಸಿದ್ದರು. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲದ ಶವಗಾರಕ್ಕೆ ರವಾನೆ ಮಾಡಲಾಗಿದೆ.



