HomeEntertainmentರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಅದ್ಧೂರಿ ರಿಸೆಪ್ಷನ್: ಮೈಸೂರು ಸಿಲ್ಕ್ ಸೀರೆಯಲ್ಲಿ ಮಿಂಚಿದ ನ್ಯಾಷನಲ್‌ ಕ್ರಶ್‌, ಆರತಕ್ಷತೆಯಲ್ಲಿ...

ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಅದ್ಧೂರಿ ರಿಸೆಪ್ಷನ್: ಮೈಸೂರು ಸಿಲ್ಕ್ ಸೀರೆಯಲ್ಲಿ ಮಿಂಚಿದ ನ್ಯಾಷನಲ್‌ ಕ್ರಶ್‌, ಆರತಕ್ಷತೆಯಲ್ಲಿ ಡಿಸಿಎಂ ಡಿಕೆಶಿ ಭಾಗಿ

For Dai;y Updates Join Our whatsapp Group

Spread the love

ನ್ಯಾಷನಲ್ ಕ್ರಷ್ ಎಂದೇ ಖ್ಯಾತಿಯಾಗಿರುವ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್‌ನ ‘ರೌಡಿ ಬಾಯ್’ ವಿಜಯ್ ದೇವರಕೊಂಡ ಅವರ ಮದುವೆ ಆರತಕ್ಷತೆ ಕಾರ್ಯಕ್ರಮ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ನಡೆಯಿತು.

ಫೆಬ್ರವರಿ 26ರಂದು ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಂತರ ನಿನ್ನೆ ತಾಜ್ ಕೃಷ್ಣ ಹೋಟೆಲ್‌ನಲ್ಲಿ ನವಜೋಡಿಯ ರಿಸೆಪ್ಷನ್ ಕಾರ್ಯಕ್ರಮವನ್ನು ಭರ್ಜರಿಯಾಗಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು ನವಜೋಡಿಯ ಸಾಂಪ್ರದಾಯಿಕ ಉಡುಗೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಮದುವೆ ಹಾಗೂ ರಿಸೆಪ್ಷನ್‌ಗಳಲ್ಲಿ ದುಬಾರಿ ಡಿಸೈನರ್ ಉಡುಪು ಧರಿಸುವುದು ರೂಢಿ. ಆದರೆ ಈ ಜೋಡಿ ವಿಭಿನ್ನವಾಗಿ ಸಾಂಪ್ರದಾಯಿಕ ವೇಷಭೂಷಣದಲ್ಲಿ ಮಿಂಚಿದರು.

ರಶ್ಮಿಕಾ ಮಂದಣ್ಣ ಅವರು ಕೆಂಪು ಬಣ್ಣದ ಮೈಸೂರು ಸಿಲ್ಕ್ ಸೀರೆ ಧರಿಸಿ ಮಿರಮಿರನೆ ಮಿಂಚಿದರೆ, ವಿಜಯ್ ದೇವರಕೊಂಡ ಪಂಚೆ ಮತ್ತು ಶರ್ಟ್ ಧರಿಸಿ ದೇಸಿ ಲುಕ್‌ನಲ್ಲಿ ಎಲ್ಲರ ಗಮನ ಸೆಳೆದರು.

ಈ ಅದ್ಧೂರಿ ಸಮಾರಂಭದಲ್ಲಿ ಸಿನಿಮಾ ಕ್ಷೇತ್ರದ ಗಣ್ಯರು ಮಾತ್ರವಲ್ಲದೆ ರಾಜಕೀಯ ನಾಯಕರು ಕೂಡ ಭಾಗವಹಿಸಿದ್ದರು. ವಿಶೇಷವಾಗಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದಲ್ಲಿ ಹಾಜರಾಗಿ ನವಜೋಡಿಗೆ ಶುಭಾಶಯ ಕೋರಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!