ಬೆಂಗಳೂರು:ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ಸಂಭವಿಸಿದೆ.
ಮೃತರನ್ನು ವೆಂಕಟೇಶ್ (50) ಎಂದು ಗುರುತಿಸಿಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, ವೆಂಕಟೇಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಜೊತೆಗೆ ಹೂಡಿಕೆಮಾಡಿದ ಷೇರುಗಳಲ್ಲಿ ನಷ್ಟ ಅನುಭವಿಸಿದ್ದರು. ಜೊತೆಗೆ ಸಾಲದ ಬಾಧೆಯೂ ಅವರಿಗೆ ತೊಂದರೆ ಆಗಿತ್ತು. ಈ ಎಲ್ಲಾ ಆಘಾತಗಳಿಂದ ನೊಂದಿದ್ದ ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ಮತ್ತು ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ್ದಾರೆ.



