HomeLife Styleಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಪರಿಹಾರ ಕ್ರಮಗಳು ಹೀಗಿವೆ

ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಕಾಡುತ್ತಿದೆಯೇ? ಹಾಗಾದ್ರೆ ಪರಿಹಾರ ಕ್ರಮಗಳು ಹೀಗಿವೆ

For Dai;y Updates Join Our whatsapp Group

Spread the love

ಇತ್ತೀಚಿನ ದಿನಗಳಲ್ಲಿ ಬೊಜ್ಜು ಸಮಸ್ಯೆ ಸಾಮಾನ್ಯವಾಗುತ್ತಿದ್ದು, ಮಕ್ಕಳು ಹಾಗೂ ವಯಸ್ಕರು ಇಬ್ಬರೂ ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಹಾರ ಪದ್ಧತಿಯಲ್ಲಿ ನಿಯಂತ್ರಣ ಇಲ್ಲದಿರುವುದು ಮತ್ತು ಜೀವನಶೈಲಿಯ ಅಸಮತೋಲನವೇ ಇದರ ಪ್ರಮುಖ ಕಾರಣ ಎಂದು ತಜ್ಞರು ಹೇಳುತ್ತಾರೆ.

ವೈದ್ಯಕೀಯ ಮಾನದಂಡದ ಪ್ರಕಾರ ದೇಹದ ಬಿಎಂಐ (BMI) 30 ಅಥವಾ ಅದಕ್ಕಿಂತ ಹೆಚ್ಚಿದ್ದರೆ ಅದನ್ನು ಸ್ಥೂಲಕಾಯ ಎಂದು ಪರಿಗಣಿಸಲಾಗುತ್ತದೆ. ಅಧಿಕ ತೂಕವು ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಇತ್ತೀಚಿನ ದಿನಗಳಲ್ಲಿ ಅಸಮತೋಲನದ ಆಹಾರ ಮತ್ತು ದೈಹಿಕ ಚಟುವಟಿಕೆಗಳ ಕೊರತೆಯಿಂದ ಅನೇಕ ಮಕ್ಕಳು ಬೊಜ್ಜಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಮಕ್ಕಳಲ್ಲಿ ಅಧಿಕ ತೂಕ ಹೆಚ್ಚಾಗಲು ದೈಹಿಕ ಚಟುವಟಿಕೆಯ ಕೊರತೆಯೂ ಪ್ರಮುಖ ಕಾರಣವಾಗಿದೆ. ಆದ್ದರಿಂದ ಮಕ್ಕಳನ್ನು ಪ್ರತಿದಿನ ಹೊರಗೆ ಹೋಗಿ ಆಟವಾಡುವಂತೆ ಪ್ರೋತ್ಸಾಹಿಸುವುದು ಅಗತ್ಯವೆಂದು ತಜ್ಞರು ಸಲಹೆ ನೀಡುತ್ತಾರೆ.

ಮಕ್ಕಳಿಗೆ ಆರೋಗ್ಯಕರ ಆಹಾರಗಳ ಬಗ್ಗೆ ಅರಿವು ಕಡಿಮೆ ಇರುವುದರಿಂದ ಜಂಕ್ ಫುಡ್‌ಗಳತ್ತ ಹೆಚ್ಚು ಆಕರ್ಷಿತರಾಗುತ್ತಾರೆ. ಇದರ ಪರಿಣಾಮವಾಗಿ ಕ್ಯಾಲೋರಿ ಸೇವನೆ ಹೆಚ್ಚಾಗಿ ತೂಕವೂ ವೇಗವಾಗಿ ಹೆಚ್ಚಾಗುತ್ತದೆ. ಹೀಗಾಗಿ ಪೋಷಕರು ಮಕ್ಕಳ ಆಹಾರದಲ್ಲಿ ಪೌಷ್ಟಿಕಾಂಶಯುಕ್ತ ಆಹಾರ ನೀಡುವತ್ತ ಗಮನಹರಿಸಬೇಕು.

ಇದೇ ವೇಳೆ ಸ್ಮಾರ್ಟ್‌ಫೋನ್, ಟಿವಿ, ಲ್ಯಾಪ್‌ಟಾಪ್ ಮುಂತಾದ ಗ್ಯಾಜೆಟ್‌ಗಳ ಬಳಕೆ ಹೆಚ್ಚಾಗಿರುವುದರಿಂದ ಅನೇಕ ಮಕ್ಕಳು ಹೊರಗೆ ಹೋಗಿ ಆಟವಾಡುವುದನ್ನು ಕಡಿಮೆ ಮಾಡಿದ್ದಾರೆ. ಗ್ಯಾಜೆಟ್‌ಗಳ ಮುಂದೆ ಹೆಚ್ಚು ಸಮಯ ಕಳೆಯುವುದು ಮಕ್ಕಳ ನಿದ್ರೆಯ ಮೇಲೂ ಪರಿಣಾಮ ಬೀರುತ್ತದೆ.

ಮಕ್ಕಳು ಸಮರ್ಪಕವಾಗಿ ನಿದ್ರೆ ಮಾಡಿದರೆ ದೇಹ ಚುರುಕಾಗಿರುತ್ತದೆ. ಉತ್ತಮ ಗುಣಮಟ್ಟದ ನಿದ್ರೆ ಮಕ್ಕಳಲ್ಲಿ ಟೈಪ್-2 ಮಧುಮೇಹ ಮತ್ತು ಬೊಜ್ಜಿನ ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!