ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಏರಿಳಿತದ ಪರಿಣಾಮ ಚಿನ್ನ ಮತ್ತು ಬೆಳ್ಳಿ ದರದಲ್ಲೂ ಬದಲಾವಣೆ ಕಂಡುಬರುತ್ತಿದೆ. ಇಂದಿನ ಆರಂಭಿಕ ವಹಿವಾಟಿನಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ಗುಡ್ ರಿಟರ್ನ್ಸ್ ವರದಿ ಮಾಡಿದೆ.
ಮಾರ್ಚ್ 16, 2026ರ ಸೋಮವಾರದಂದು 24 ಕ್ಯಾರೆಟ್ ಚಿನ್ನದ 10 ಗ್ರಾಂ ದರದಲ್ಲಿ 490 ರೂಪಾಯಿ ಇಳಿಕೆ ಕಂಡುಬಂದಿದ್ದು, ಬೆಲೆ 1,59,170 ರೂಪಾಯಿಗೆ ತಲುಪಿದೆ. ಇದೇ ವೇಳೆ 1 ಗ್ರಾಂ ಚಿನ್ನದ ಬೆಲೆ 49 ರೂಪಾಯಿ ಇಳಿಕೆ ಆಗಿ 15,917 ರೂಪಾಯಿಗೆ ದಾಖಲಾಗಿದೆ.
ಇನ್ನು 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ 45 ರೂಪಾಯಿ ಇಳಿಕೆ ಕಂಡು 14,590 ರೂಪಾಯಿಗೆ ತಲುಪಿದ್ದು, 10 ಗ್ರಾಂ ಚಿನ್ನದ ದರ 1,45,900 ರೂಪಾಯಿಗೆ ಇಳಿಕೆಯಾಗಿದೆ.
ಬೆಳ್ಳಿ ದರದಲ್ಲಿಯೂ ಗಮನಾರ್ಹ ಕುಸಿತ ಕಂಡುಬಂದಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ಸುಮಾರು 5 ಸಾವಿರ ರೂಪಾಯಿ ಇಳಿಕೆ ಆಗಿ 2,70,000 ರೂಪಾಯಿಗೆ ತಲುಪಿದೆ.
ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್-ಅಮೆರಿಕ ಸಂಘರ್ಷದ ನಡುವೆ ಡಾಲರ್ ಮೌಲ್ಯದ ಏರಿಳಿತದ ಪರಿಣಾಮ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಭಾರಿ ಚಲನೆ ಕಂಡುಬರುತ್ತಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.



