ಕಲಬುರಗಿ:ವ್ಯಕ್ತಿಯೋರ್ವ ಹಾಡುಹಗಲೇ ನಡುರಸ್ತೆಯಲ್ಲಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ನಡೆದಿದೆ.
ಮಹಾರಾಷ್ಟ್ರ ಮೂಲದ ಶೈಲಾ (28) ಹತ್ಯೆಗೆ ಒಳಗಾದ ಮಹಿಳೆ. ಆರೋಪಿ ಪತಿ ಅಕ್ಷಯ್ ತನ್ನ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬಂದು ಮಧ್ಯ ರಸ್ತೆಯಲ್ಲಿ ಇಳಿಸಿ, ಕತ್ತು ಕೊಯ್ದು ಹತ್ಯೆಗೈದಿದ್ದಾನೆ.
ಹತ್ಯೆಯ ಬಳಿಕ ಶವದ ಮೇಲೆ ಕಾರು ಹಾಯಿಸಿರುವುದು ಪ್ರಕರಣದ ಕ್ರೂರತೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಈ ಸಂಪೂರ್ಣ ಘಟನೆ ಸ್ಥಳೀಯರೊಬ್ಬರ ಮೊಬೈಲ್‌ನಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಈ ಘಟನೆ ಸಾರ್ವಜನಿಕ ಸುರಕ್ಷತೆ ಮತ್ತು ಕುಟುಂಬ ಸಂಬಂಧಗಳ ಹಿನ್ನಲೆಯಲ್ಲಿ ಗಂಭೀರ ಪ್ರಶ್ನೆಗಳನ್ನು ಎತ್ತುತ್ತಿದೆ.



