ಬೆಂಗಳೂರು: ಮಾ.30ರಂದು ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಮಹಾವೀರ ಜಯಂತಿ ರಜೆಯ ದಿನಾಂಕದಲ್ಲಿ ಬದಲಾವಣೆ ಮಾಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಮಾ.31ರಂದು ರಜೆ ಇರುವುದರಿಂದ ಹಿಂದಿ ಪರೀಕ್ಷೆಯನ್ನು ಮಾ.30ಕ್ಕೆ ನಿಗದಿ ಮಾಡಲಾಗಿತ್ತು.
ಆದರೆ, ಇದೀಗ ಸರ್ಕಾರ ಮಾ.31ರ ರಜೆಯನ್ನು ಮಾ.30ಕ್ಕೆ ಮುಂದೂಡಿರುವುದರಿಂದ, ಪರೀಕ್ಷಾ ದಿನಾಂಕವನ್ನು ಪರಿಷ್ಕರಿಸಿ ಮಾ.31ರಂದು ನಡೆಸಲು ತೀರ್ಮಾನಿಸಲಾಗಿದೆ.
ಹೀಗಾಗಿ, ಮಾ.30ರಂದು ಮಹಾವೀರ ಜಯಂತಿ ರಜೆ ಇರಲಿದ್ದು, ಮಾ.31ರಂದು ಹಿಂದಿ ಪರೀಕ್ಷೆ ನಡೆಯಲಿದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ.



