ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ಈ ಸಭೆಯ ಉದ್ದೇಶ ದೇಶದ ಒಟ್ಟಾರೆ ಸಿದ್ಧತೆ, ಭದ್ರತಾ ತಂತ್ರಗಳು ಮತ್ತು ಯೋಜನೆಗಳನ್ನು ಪರಿಶೀಲಿಸುವುದು ಎಂದು ತಿಳಿಸಲಾಗಿದೆ.
ಆದರೆ ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಸಂಹಿತೆ ಕಾರಣದಿಂದ ಈ ಸಭೆಯಲ್ಲಿ ಭಾಗವಹಿಸಲಾರರು. ಹೀಗಾಗಿ, ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರತ್ಯೇಕ ಸಭೆಯನ್ನು ಶೀಘ್ರದಲ್ಲೇ ಆಯೋಜಿಸಲು ಯೋಜನೆ ರೂಪಿಸಲಾಗಿದೆ.
ಇನ್ನೂ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸುತ್ತಾರೋ ಇಲ್ಲವೋ ಅನ್ನೋದು ಕುತೂಹಲ ಕೆರಳಿಸಿದೆ.



