ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧವನ್ನು ಕೊನೆಗೊಳಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಕಲ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಇರಾನ್ ಜೊತೆ ಮಾತುಕತೆ ಮುಂದುವರಿಸಲು ಇಂಧನ ಸೌಲಭ್ಯಗಳ ಮೇಲಿನ ದಾಳಿ ಮತ್ತೆ 10 ದಿನಗಳವರೆಗೆ ವಿರಾಮಗೊಳಿಸಿರುವುದಾಗಿ ಘೋಷಿಸಿದ್ದಾರೆ.
ಟ್ರಂಪ್ ಈ ನಿರ್ಧಾರವನ್ನು ಇರಾನಿನ ಸರ್ಕಾರದ ಕೋರಿಕೆಯ ಮೇರೆಗೆ ತೆಗೆದುಕೊಂಡಿದ್ದಾರೆ ಮತ್ತು ಇದು ಇಬ್ಬರ ನಡುವೆ ಶಾಂತಿಯುತ ಮಾತುಕತೆಗೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಈ ಮಾಹಿತಿಯನ್ನು ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್ನಲ್ಲಿ ಹಂಚಿಕೊಂಡಿದ್ದಾರೆ.
ಟ್ರಂಪ್ ಪೋಸ್ಟ್ನಲ್ಲಿ, “ಇರಾನಿನ ಸರ್ಕಾರದ ಕೋರಿಕೆಯ ಮೇರೆಗೆ, ನಾನು ಇಂಧನ ಸ್ಥಾಪನೆಗಳ ಮೇಲಿನ ದಾಳಿಯನ್ನ 10 ದಿನಗಳವರೆಗೆ ವಿರಾಮಗೊಳಿಸುತ್ತಿದ್ದೇನೆ. ಇದು ಏಪ್ರಿಲ್ 6ರ ರಾತ್ರಿ 8 ಗಂಟೆಯವರೆಗೆ ಮುಂದುವರಿಯುತ್ತದೆ” ಎಂದು ತಿಳಿಸಿದ್ದೇವೆ.
ಅಲ್ಲದೇ, ಮಾಧ್ಯಮ ವರದಿಗಳಲ್ಲಿ ಇರಾನ್ ಮಾತುಕತೆಗೆ ಒಪ್ಪಿಲ್ಲ ಎನ್ನುವ ತೀವ್ರ ಸುದ್ದಿಗಳನ್ನು ಟ್ರಂಪ್ ತಳ್ಳಿಹಾಕಿದ್ದಾರೆ. ಅಮೆರಿಕಾ ಮತ್ತು ಇರಾನ್ ನಡುವೆ ನಡೆಯುತ್ತಿರುವ ಮಾತುಕತೆ ಸಕಾರಾತ್ಮಕ ದಿಕ್ಕಿನಲ್ಲಿ, ಚೆನ್ನಾಗಿ ನಡೆಯುತ್ತಿವೆ ಎಂದು ದೃಢಪಡಿಸಿದ್ದಾರೆ.



