Home Karnataka News ಪ್ರಯಾಣಿಕರ ಬೇಡಿಕೆ ಈಡೇರಿಸಿದ ರೈಲ್ವೆ ಇಲಾಖೆ: ಈ ಭಾಗದಲ್ಲಿ ಮೆಮು ರೈಲು ಸೇವೆ ಆರಂಭ!

ಪ್ರಯಾಣಿಕರ ಬೇಡಿಕೆ ಈಡೇರಿಸಿದ ರೈಲ್ವೆ ಇಲಾಖೆ: ಈ ಭಾಗದಲ್ಲಿ ಮೆಮು ರೈಲು ಸೇವೆ ಆರಂಭ!

0
ಪ್ರಯಾಣಿಕರ ಬೇಡಿಕೆ ಈಡೇರಿಸಿದ ರೈಲ್ವೆ ಇಲಾಖೆ: ಈ ಭಾಗದಲ್ಲಿ ಮೆಮು ರೈಲು ಸೇವೆ ಆರಂಭ!
Spread the love

ಬೆಂಗಳೂರು: ತುಮಕೂರು ಮಾರ್ಗವಾಗಿ ಬೆಂಗಳೂರಿನಿಂದ ಅರಸೀಕೆರೆಗೆ ನೂತನ ಮೆಮು ರೈಲು ಸೇವೆ ಆರಂಭವಾಗಿದ್ದು, ಪ್ರಯಾಣಿಕರ ಬಹುದಿನದ ಬೇಡಿಕೆಗೆ ಸ್ಪಂದನೆ ದೊರೆತಿದೆ.

ಯಲಹಂಕದಿಂದ ಯಶವಂತಪುರ ಮಾರ್ಗವಾಗಿ ಈ ರೈಲು ಸಂಚಾರ ನಡೆಸಲಿದೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ವಿದ್ಯಾರ್ಥಿಗಳು, ದಿನಗೂಲಿ ಕಾರ್ಮಿಕರು, ಉದ್ಯೋಗಿಗಳು, ರೈತರು ಹಾಗೂ ವ್ಯಾಪಾರಿಗಳಿಗೆ ಈ ಮೆಮು ರೈಲು ಕೈಗೆಟುಕುವ ಮತ್ತು ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯಾಗಲಿದೆ. ಪ್ರಯಾಣಿಕರು ಈ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ರೈಲು ಸಂಖ್ಯೆ 66505 ಯಲಹಂಕದಿಂದ ಬೆಳಿಗ್ಗೆ 6.45ಕ್ಕೆ ಹೊರಟು, ಯಶವಂತಪುರ ಮಾರ್ಗವಾಗಿ ಬೆಳಿಗ್ಗೆ 8.58ಕ್ಕೆ ತುಮಕೂರಿಗೆ ತಲುಪಿ, 11 ಗಂಟೆಗೆ ಅರಸೀಕೆರೆಯನ್ನು ಸೇರುತ್ತದೆ. ಅದೇ ರೀತಿ, ರೈಲು ಸಂಖ್ಯೆ 66506 ಅರಸೀಕೆರೆಯಿಂದ ಮಧ್ಯಾಹ್ನ 2.15ಕ್ಕೆ ಹೊರಟು, ಸಂಜೆ 4.38ಕ್ಕೆ ತುಮಕೂರಿಗೆ ತಲುಪಿ, 7.15ಕ್ಕೆ ಯಲಹಂಕಕ್ಕೆ ಆಗಮಿಸುತ್ತದೆ.

ಈ ಮೆಮು ರೈಲು ಸೇವೆ ಭಾನುವಾರವನ್ನು ಹೊರತುಪಡಿಸಿ ವಾರದ ಆರು ದಿನಗಳ ಕಾಲ ಲಭ್ಯವಿರಲಿದೆ ಎಂದು ತಿಳಿಸಲಾಗಿದೆ.

ಇದೇ ವೇಳೆ, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಭಾನುವಾರವೂ ಸೇರಿ ವಾರದ ಏಳು ದಿನಗಳ ಕಾಲ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಮನವಿ ಮಾಡಲಾಗಿದೆ. ವಿಶೇಷವಾಗಿ ತಿಪಟೂರಿನಿಂದ ಭಾನುವಾರ ಮಧ್ಯಾಹ್ನದ ಬಳಿಕ ರೈಲುಗಳಿಲ್ಲದ ಹಿನ್ನೆಲೆಯಲ್ಲಿ ಆ ದಿನವೂ ಸೇವೆ ಅಗತ್ಯವಿದೆ ಎಂದು ಪ್ರಯಾಣಿಕರು ಸಚಿವರ ಗಮನ ಸೆಳೆದಿದ್ದಾರೆ.


Spread the love

LEAVE A REPLY

Please enter your comment!
Please enter your name here