ಬೆಂಗಳೂರು: 2026ರ ಐಪಿಎಲ್ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಪಂದ್ಯ ನಡೆಯುವ ದಿನಗಳಲ್ಲಿ ಮೆಟ್ರೋ ಸೇವೆಯನ್ನು ತಡರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗುತ್ತದೆ ಎಂದು BMRCL ತಿಳಿಸಿದೆ.
ಇಂದು RCB ಮತ್ತು ಎಸ್ಆರ್ಎಚ್ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ. ಪಂದ್ಯ ವೀಕ್ಷಿಸಿ ಮನೆಗೆ ಮರಳುವವರಿಗೆ ಅನುಕೂಲವಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಾಮಾನ್ಯವಾಗಿ ರಾತ್ರಿ 11 ಗಂಟೆಗೆ ಕೊನೆಯ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಐಪಿಎಲ್ ಪಂದ್ಯ ದಿನಗಳಲ್ಲಿ ಎಲ್ಲಾ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಮೆಜೆಸ್ಟಿಕ್ ನಿಲ್ದಾಣದಿಂದ ನಾಲ್ಕೂ ದಿಕ್ಕುಗಳಿಗೆ ಕೊನೆಯ ರೈಲು ಮಧ್ಯರಾತ್ರಿ 1.30ಕ್ಕೆ ಹೊರಡಲಿದೆ.
ಇನ್ನೂ, ಐಪಿಎಲ್ ಪಂದ್ಯ ಟಿಕೆಟ್ಗಳ ಮೇಲೆ ಮೆಟ್ರೋ ಕ್ಯೂಆರ್ ಕೋಡ್ ಮುದ್ರಣಗೊಂಡಿದ್ದು, ಕ್ರೀಡಾಂಗಣಕ್ಕೆ ಬರುವವರು ಕಬ್ಬನ್ ಪಾರ್ಕ್ ಅಥವಾ ಮಹಾತ್ಮ ಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳನ್ನು ಬಳಸುವಂತೆ ಸೂಚಿಸಲಾಗಿದೆ.
ನಗರದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು 44 ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.



