ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮಹೇಂದ್ರ ಸಿಂಗ್ ಧೋನಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆ ಇದೆ.
ಸ್ನಾಯು ಸೆಳೆತ ಸಮಸ್ಯೆಯಿಂದ ಬಳಲುತ್ತಿರುವ ಧೋನಿ, ಐಪಿಎಲ್ನ ಮೊದಲ ಎರಡು ವಾರಗಳ ಪಂದ್ಯಗಳಲ್ಲಿ ಆಡಲು ಸಾಧ್ಯವಿಲ್ಲ ಎಂದು ವರದಿಯಾಗಿದೆ. ಇದರಿಂದ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆ ಹೆಚ್ಚು.
ಧೋನಿ ಅನುಪಸ್ಥಿತಿಯಲ್ಲಿ ತಂಡದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಅವರು ವಿಕೆಟ್ ಕೀಪಿಂಗ್ ಅಭ್ಯಾಸ ಮಾಡುತ್ತಿರುವುದು ಗಮನಾರ್ಹವಾಗಿದೆ.
ಇನ್ನೊಂದೆಡೆ, ಧೋನಿ ಸಂಪೂರ್ಣ ಫಿಟ್ನೆಸ್ ಹೊಂದಿದರೆ ಏಪ್ರಿಲ್ 19ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಅದುವರೆಗೆ ಅವರು ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಪಂದ್ಯಗಳಲ್ಲಿ ‘ಥಲಾ’ ಅಭಿಮಾನಿಗಳಿಗೆ ನಿರಾಶೆ ಎದುರಾಗುವ ಸಾಧ್ಯತೆ ಇದೆ. ಧೋನಿ ಹೊರಗುಳಿದರೆ ಸರ್ಫರಾಝ್ ಖಾನ್ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.



