ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಅಭಿಷೇಕ್ (21) ಮತ್ತು ಮನೋಜ್ (21) ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸವಿದ್ದು ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ಶುಕ್ರವಾರ ರಾತ್ರಿ ಒಂದೇ ಬೈಕ್‌ನಲ್ಲಿ ಕುಣಿಗಲ್ ಕಡೆಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಈ ದುರಂತದಲ್ಲಿ ನವೀನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



