ನವದೆಹಲಿ: ಉತ್ತರ ಪ್ರದೇಶದ ಜೇವರ್‌ನಲ್ಲಿ ನಿರ್ಮಾಣಗೊಂಡಿರುವ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಯೋಜನೆ ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಮಾನ ನಿಲ್ದಾಣವು ಪ್ರಾದೇಶಿಕ ಅಭಿವೃದ್ಧಿ ಮತ್ತು ಸಂಪರ್ಕ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಇದು ಭಾರತದ ಹೊಸ ಚೈತನ್ಯದ ಸಂಕೇತವಾಗಿದ್ದು, ಉತ್ತರ ಪ್ರದೇಶದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ ಎಂದು ಹೇಳಿದರು.
ಈ ಯೋಜನೆ ಪಶ್ಚಿಮ ಉತ್ತರ ಪ್ರದೇಶದ ರೈತರು ಮತ್ತು ಯುವಜನರಿಗೆ ಹೆಚ್ಚಿನ ಅವಕಾಶಗಳನ್ನು ನೀಡಲಿದೆ. ಜೊತೆಗೆ, ರಾಜ್ಯದ ಅಭಿವೃದ್ಧಿಗೆ ಹೊಸ ಗುರುತು ತರುವುದಾಗಿ ಮೋದಿ ಹೇಳಿದರು.
ಅಲ್ಲದೆ, ನೋಯ್ಡಾ ವಿಮಾನ ನಿಲ್ದಾಣದಿಂದ ಆಗ್ರಾ, ಮಥುರಾ, ಗಾಜಿಯಾಬಾದ್, ಮೀರತ್, ಇಟಾವಾ ಸೇರಿದಂತೆ ಹಲವು ಪ್ರದೇಶಗಳಿಗೆ ಪ್ರಯೋಜನವಾಗಲಿದೆ ಎಂದು ಅವರು ತಿಳಿಸಿದ್ದಾರೆ.



