ರಾಯಚೂರು: ನಕಲಿ ವೈದ್ಯ ನೀಡಿದ ಇಂಜೆಕ್ಷನ್ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ದುರ್ಘಟನೆ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಬಿಂದು (14) ಎಂದು ಗುರುತಿಸಲಾಗಿದೆ. ಜ್ವರದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕೆ, ನಕಲಿ ವೈದ್ಯನ ಬಳಿ ಇಂಜೆಕ್ಷನ್ ಪಡೆದಿದ್ದಳು.
ಇಂಜೆಕ್ಷನ್‌ಗೆ ರಿಯಾಕ್ಷನ್ ಉಂಟಾಗಿ ಆರೋಗ್ಯ ತೀವ್ರವಾಗಿ ಹದಗೆಟ್ಟ ಪರಿಣಾಮ ಬಿಂದು ಮೃತಪಟ್ಟಿದ್ದಾಳೆ. ಘಟನೆಯ ನಂತರ ನಕಲಿ ವೈದ್ಯ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕವಿತಾಳ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಪ್ರಕರಣ ಕವಿತಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



