ಕೋಲ್ಕತ್ತಾ: ಸಾಮಾನ್ಯವಾಗಿ ರೈಲ್ವೆ ನಿಲ್ದಾಣಗಳ ಸುತ್ತಮುತ್ತ 24 ಗಂಟೆಯೂ ಜನ ಸಂಚಾರ ಜೋರಾಗಿರುತ್ತದೆ. ಆದರೂ, ಜನಸಂದಣಿ ನಡುವೆಯೇ ಕಳ್ಳತನದ ಘಟನೆ ನಡೆದಿದೆ.
ಕೋಲ್ಕತ್ತಾದ ಶಾಲಿಮರ್ ರೈಲ್ವೆ ನಿಲ್ದಾಣದ ಬಳಿ ಅಕ್ಕ-ತಂಗಿ ಲಗೇಜ್ ಹಿಡಿದು ನಿಂತಿದ್ದ ವೇಳೆ, ಬೈಕ್‌ನಲ್ಲಿ ಬಂದ ಕಳ್ಳನೊಬ್ಬ ಯುವತಿಯ ಕೈಯಿಂದ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದಾನೆ.
ಯುವತಿಯ ಬ್ಯಾಗ್‌ನಲ್ಲಿ ಪ್ರಮುಖ ದಾಖಲೆಗಳು ಇದ್ದವು ಎಂದು ತಿಳಿದುಬಂದಿದೆ. ಈ ಸಂಬಂಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.



