ಬೀದರ್: ಕೃಷಿ ಚಟುವಟಿಕೆಗಾಗಿ ಜಮೀನಿಗೆ ತೆರಳಿದ್ದ ಯುವ ರೈತ ಸಿಡಿಲು ಬಡಿದು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ರಾಹುಲ್ ಭಾಸ್ಕರ್ (25) ಎಂದು ಗುರುತಿಸಲಾಗಿದೆ. ಕೆಲಸದ ನಿಮಿತ್ತ ತಮ್ಮ ಜಮೀನಿನಲ್ಲಿ ಇದ್ದಾಗ ಏಕಾಏಕಿ ಮಳೆ-ಸಿಡಿಲು ಆರಂಭವಾಗಿದ್ದು, ಈ ವೇಳೆ ಸಿಡಿಲು ಬಡಿದು ರಾಹುಲ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಕುಟುಂಬದ ಆಧಾರಸ್ತಂಭವಾಗಿದ್ದ ಯುವಕನ ಸಾವಿನಿಂದ ಪೋಷಕರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಬೀದರ್, ಔರಾದ್, ಭಾಲ್ಕಿ ಸೇರಿದಂತೆ ಹಲವು ಕಡೆಗಳಲ್ಲಿ ಮುಂಜಾನೆ ಮಳೆಯಾಗಿರುವುದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.



