ಮಂಗಳೂರು:- ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಏಕಾಏಕಿ ಡೋರ್ ಓಪನ್ ಆಗಿ ವಿದ್ಯಾರ್ಥಿನಿಯರು ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಜರುಗಿದೆ.
ಹತ್ತನೇ ತರಗತಿ ವಿದ್ಯಾರ್ಥಿನಿ ಚರಿಷ್ಮಾ, ಪಿಯುಸಿ ವಿದ್ಯಾರ್ಥಿನಿ ಚಸ್ಮಿಕಾ ಗಾಯಗೊಂಡವರು. ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸರ್ಕಾರಿ ಬಸ್ ಸಂಚರಿಸುತ್ತಿತ್ತು. ಸಂಚಾರದ ವೇಳೆ ಇದ್ದಕ್ಕಿದ್ದಂತೆ ಬಸ್‌ನ ಬಾಗಿಲು ತೆರೆದಿದೆ. ಈ ವೇಳೆ ದುರಂತ ಸಂಭವಿಸಿದೆ.
ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.



