ಕಲಬುರಗಿ: ಮಹಾನಗರ ಪಾಲಿಕೆ ಬಜೆಟ್ ಮಂಡನೆಗೂ ಮುನ್ನ ಇರಾನ್ ಪರಮೋಚ್ಚ ನಾಯಕ ಅಯೊತೊಲ್ಲಾ ಅಲಿ ಖಮೇನಿ ಹತ್ಯೆಗೆ ಸಂತಾಪ ಸೂಚಿಸಿರುವ ಘಟನೆ ನಡೆದಿದೆ.
ನಗರದ ಟೌನ್ ಪ್ರದೇಶದಲ್ಲಿರುವ ಪಾಲಿಕೆ ಸಭಾಂಗಣದಲ್ಲಿ ಇಂದು ಬಜೆಟ್ ಮಂಡನೆ ನಡೆಯುತ್ತಿದ್ದ ಸಂದರ್ಭದಲ್ಲಿ, ವಾರ್ಡ್ ನಂ.24ರ ಸದಸ್ಯೆ ಸಯೀದಾ ನೂರ್ ಫಾತೀಮಾ ಜೈದಿ ಅವರು ಸಂತಾಪ ನಿರ್ಣಯವನ್ನು ಮಂಡಿಸಿದರು.
ಈ ನಿರ್ಣಯದ ಬಳಿಕ ಪಾಲಿಕೆ ಮೇಯರ್, ಆಯುಕ್ತರು ಹಾಗೂ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಸದಸ್ಯರು ಕೂಡ ಸಂತಾಪ ಸೂಚಿಸಿದರು.



