ದಾವಣಗೆರೆ: ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಅನಗತ್ಯವಾಗಿ ಗ್ರಾಹಕರು ಕ್ಯೂನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ, ಬೇಕಾದಷ್ಟು ಸಿಲಿಂಡರ್ಗಳು ಲಭ್ಯವಿವೆ ಎಂದು ತಿಳಿಸಿದ್ದಾರೆ.
ವಿಶೇಷವಾಗಿ ಎಲ್ಪಿಜಿ ಆಟೋರಿಕ್ಷಾಗಳ ಬಳಕೆಗೆ ಪ್ರತಿದಿನ ಸುಮಾರು 3000 ಸಿಲಿಂಡರ್ಗಳು ಖರ್ಚಾಗುತ್ತಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಬಿಪಿಎಲ್ ಮತ್ತು ಎಚ್ಪಿಸಿಎಲ್ ಕಂಪನಿಗಳಿಂದ ಸಮರ್ಪಕವಾಗಿ ಪೂರೈಕೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲೂ ಕೊರತೆ ಇಲ್ಲ ಎಂದು ಭರವಸೆ ನೀಡಿದ್ದಾರೆ.
ಇದೇ ವೇಳೆ, ಖಾಸಗಿ ಗ್ಯಾಸ್ ಏಜೆನ್ಸಿಗಳೇ ಗೊಂದಲಕ್ಕೆ ಕಾರಣವಾಗಿದ್ದು, ಅವು ಎಲ್ಪಿಜಿ ದರವನ್ನು ಹೆಚ್ಚಿಸಿರುವುದಾಗಿ ಆರೋಪಿಸಿದ್ದಾರೆ. ಈ ಕುರಿತು ಪೆಟ್ರೋಲಿಯಂ ಸಚಿವರಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ ಅವರು, ಖಾಸಗಿ ಸಂಸ್ಥೆಗಳೂ ಸರ್ಕಾರ ನಿಗದಿಪಡಿಸಿದ ದರದಲ್ಲೇ ಎಲ್ಪಿಜಿ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.



