HomeKarnataka Newsಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಿಸಿದ ಡಿಜಿಪಿ ಡಾ.ಎಂ.ಎ.ಸಲೀಂ

ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಿಸಿದ ಡಿಜಿಪಿ ಡಾ.ಎಂ.ಎ.ಸಲೀಂ

For Dai;y Updates Join Our whatsapp Group

Spread the love

ಬೆಂಗಳೂರು: ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನ ಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆ ಪರಿಚಯಿಸಿದ್ದು, ಇಂದು ಬುಧವಾರ(ಏ.1) ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದ ಡಾ.ಎಂ.ಎ.ಸಲೀಂ ಅವರು ಅವರು ತಮ್ಮ ಕಚೇರಿಯಲ್ಲಿ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ ಪೂರ್ಣಗೊಳಿಸಿದರು.

ಕರ್ನಾಟಕ ರಾಜ್ಯದ ಜನಗಣತಿ ನಿರ್ದೇಶಕರಾದ ರಾಮಚಂದ್ರನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 2026 ರ ಏಪ್ರಿಲ್ 1 ರಿಂದ 15 ರವರೆಗೆ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ se.census.gov.in ಮೂಲಕ ತಮ್ಮ ಮಾಹಿತಿಯನ್ನು ಆನ್ಲೈನ್ನಲ್ಲಿ ದಾಖಲಿಸಿಕೊಳ್ಳಬಹುದು ಎಂದು ತಿಳಿಸಿದರು.

“ನಮ್ಮ ಜನಗಣತಿ – ನಮ್ಮ ಅಭಿವೃದ್ಧಿ” ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027 ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಪ್ರಕ್ರಿಯೆ ಅತ್ಯಂತ ಸರಳ ಮತ್ತು ಸುರಕ್ಷಿತವಾಗಿದ್ದು, ನಾಗರಿಕರು ಯಾವುದೇ ಆತಂಕವಿಲ್ಲದೇ ಸ್ವಯಂ ಮಾಹಿತಿಯನ್ನು ದಾಖಲಿಸಬಹುದು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!