ಚಂಡೀಗಢ: ಗುಜರಾತ್ ಟೈಟಾನ್ಸ್ ವಿರುದ್ಧದ ಗೆಲುವಿನ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಗೆ 12 ಲಕ್ಷ ದಂಡ ವಿಧಿಸಲಾಗಿದೆ.
ಗುಜರಾತ್ ಟೈಟಾನ್ಸ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 3 ವಿಕೆಟ್‌ಗಳಿಂದ ಗೆಲವು ಸಾಧಿಸಿದೆ. ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಗುಜರಾತ್ 6 ವಿಕೆಟ್ ನಷ್ಟಕ್ಕೆ 162 ರನ್ ಹೊಡೆಯಿತು. ಈ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ 165 ರನ್ ಹೊಡೆದು ಟೂರ್ನಿಯಲ್ಲಿ ಶುಭಾರಂಭ ಮಾಡಿತು.



