ತುಮಕೂರು:- ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಕೋರಗೆರೆ ಸೇತುವೆ ಮೇಲೆ ಭೀಕರ ಅಪಘಾತ ಸಂಭವಿಸಿದೆ.
ಕಾರೊಂದು ಬೆಂಕಿಯಲ್ಲಿ ಹೊತ್ತಿ ಉರಿದಿದ್ದು, ಮೂವರು ಸಜೀವದಹನವಾಗಿದ್ದಾರೆ. ಮೃತರು ಗುಬ್ಬಿ ತಾಲೂಕಿನವರು ಎನ್ನಲಾಗುತ್ತಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಸದ್ಯ ಗಾಯಾಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇಂದು ನಾಲ್ವರು ಪಂಚಣಿಯಹಳ್ಳಿ ಹತ್ತಿರದ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದುಕೊಂಡು ವಾಪಸ್ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಸೇತುವೆಯ ತಡೆಗೊಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸಜೀವದಹನವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.



