HomeKarnataka Newsಪ್ರವಾಸದ ವೇಳೆ ದುರಂತ: ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು!

ಪ್ರವಾಸದ ವೇಳೆ ದುರಂತ: ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು!

For Dai;y Updates Join Our whatsapp Group

Spread the love

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಎಡಮುರಿ ಕಾವೇರಿ ನದಿಯಲ್ಲಿ ಭಾನುವಾರ ನಡೆದ ದುರಂತದಲ್ಲಿ ಬೆಂಗಳೂರಿನ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಮೃತ ಯುವಕನನ್ನು ಬೆಂಗಳೂರಿನ ರಾಮಮೂರ್ತಿನಗರ ನಿವಾಸಿ ವಿಘ್ನೇಶ್ (25) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದು, ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಮಂಡ್ಯ ಜಿಲ್ಲೆಗೆ ಆಗಮಿಸಿದ್ದರು.

ಮಾಹಿತಿ ಪ್ರಕಾರ, ವಿಘ್ನೇಶ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಬಲಮುರಿ-ಎಡಮುರಿ ಪ್ರದೇಶಕ್ಕೆ ಭೇಟಿ ನೀಡಿದ್ದರು. ಪ್ರವಾಸದ ವೇಳೆ ಅವರು ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದು, ಈ ಸಮಯದಲ್ಲಿ ವಿಘ್ನೇಶ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ. ಸಹಯಾತ್ರಿಗಳು ತಕ್ಷಣ ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.

ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಮೃತದೇಹವನ್ನು ನದಿಯಿಂದ ಹೊರತೆಗೆದು ಮುಂದಿನ ಕ್ರಮ ಕೈಗೊಂಡರು.

ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ತನಿಖೆ ಮುಂದುವರಿದಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!