ಬೆಂಗಳೂರು: ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ವೇಗವಾಗಿ ಬಂದ ಆಂಧ್ರ ಸಾರಿಗೆ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಅಧೋನಿಯಿಂದ ಅನಂತಪುರ ಮೂಲಕ ಬೆಂಗಳೂರಿಗೆ ಬರುತ್ತಿದ್ದ ಬಸ್, ವೇಗವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗದ ಚಕ್ರ ಹಾಗೂ ಎಂಜಿನ್ ಕಿತ್ತು ಹೊರಬಿದ್ದಿದ್ದು, ಬಸ್ ಭಾರೀ ಹಾನಿಗೊಳಗಾಗಿದೆ.
ಅದೃಷ್ಟವಶಾತ್ ಅಪಘಾತದಲ್ಲಿ ಪ್ರಯಾಣಿಕರು ಸೇಫ್ ಆಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ.
ಘಟನೆಯ ಮಾಹಿತಿ ತಿಳಿದ ತಕ್ಷಣ ಹೈಗ್ರೌಂಡ್ಸ್ ಪೊಲೀಸರು ಸ್ಥಳಕ್ಕೆ ಆಗಮಿಸಿ, ಡಿವೈಡರ್‌ಗೆ ಸಿಲುಕಿರುವ ಬಸ್‌ನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.



