HomeBengaluru Newsಬಕೆಟ್ ನೀರಿನಲ್ಲಿ ಮಗು ಸಾವು, ಅಪರಾಧ ಭಾವನೆಗೆ ತಾಯಿ ಆತ್ಮಹತ್ಯೆ: ಬೆಂಗಳೂರಿನಲ್ಲಿ ಮನಕಲುಕುವ ದುರಂತ

ಬಕೆಟ್ ನೀರಿನಲ್ಲಿ ಮಗು ಸಾವು, ಅಪರಾಧ ಭಾವನೆಗೆ ತಾಯಿ ಆತ್ಮಹತ್ಯೆ: ಬೆಂಗಳೂರಿನಲ್ಲಿ ಮನಕಲುಕುವ ದುರಂತ

For Dai;y Updates Join Our whatsapp Group

Spread the love

ಬೆಂಗಳೂರು: ನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದ್ದು, ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ಮನನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ.

ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ ಪುತ್ರ ಅಗಸ್ತ್ಯ ಎಂದು ಗುರುತಿಸಲಾಗಿದೆ. ಪ್ರತಿಭಾ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಗುರುವಾರ ಸಂಜೆ ಟೆರೇಸ್ ಮೇಲೆ ಒಣಗಲು ಹಾಕಿದ್ದ ಬಟ್ಟೆಗಳನ್ನು ತರಲು ಮೇಲಕ್ಕೆ ಹೋಗಿದ್ದಾಗ, ಈ ದುರ್ಘಟನೆ ಸಂಭವಿಸಿದೆ.

ಈ ವೇಳೆ ಆಟವಾಡುತ್ತಿದ್ದ ಮಗು ಬಚ್ಚಲು ಮನೆಗೆ ತೆರಳಿ, ನೀರಿನಿಂದ ತುಂಬಿದ್ದ ಬಕೆಟ್‌ನಲ್ಲಿ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದೆ. ಕೆಳಗೆ ಬಂದ ಪ್ರತಿಭಾಗೆ ಮಗುವಿನ ಸ್ಥಿತಿ ಕಂಡು ಆಘಾತವಾಗಿದ್ದು, ಮಗು ಸಾವನ್ನಪ್ಪಿರುವುದು ಖಚಿತವಾದ ಬಳಿಕ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ.

ರಾತ್ರಿ ಪತಿ ಮನೆಗೆ ಮರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಒಳಗೆ ಪ್ರವೇಶಿಸಿದಾಗ ಪ್ರತಿಭಾ ನೇಣಿಗೆ ಶರಣಾಗಿರುವುದು ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಕೂಡ ಸಿಕ್ಕಿದ್ದು, “ನನ್ನ ಮಗುವಿನ ಸಾವಿಗೆ ನಾನೇ ಕಾರಣ” ಎಂದು ಅವರು ಬರೆದಿರುವುದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆತ್ಮಹತ್ಯೆಗೆ ಮುನ್ನ ಅವರು ಮಾತ್ರೆ ಸೇವಿಸಿ, ಕೈ ಕತ್ತರಿಸಲು ಯತ್ನಿಸಿ, ಬಳಿಕ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಚಂದ್ರಾಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಪೋಷಕರ ನಿರ್ಲಕ್ಷ್ಯವಲ್ಲ, ಆದರೆ ಕ್ಷಣಿಕ ಅಜಾಗರೂಕತೆ ಎಷ್ಟು ಭೀಕರ ಪರಿಣಾಮ ಉಂಟುಮಾಡಬಹುದು ಎಂಬುದಕ್ಕೆ ಮರ್ಮಾಂತಿಕ ಉದಾಹರಣೆಯಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!