HomeCrime Newsಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ! ಕೊಲೆ ಶಂಕೆ

ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ! ಕೊಲೆ ಶಂಕೆ

For Dai;y Updates Join Our whatsapp Group

Spread the love

ಚಿತ್ರದುರ್ಗ: ಜನಪರ ಕೆಲಸಗಳಿಂದ ಹೆಸರು ಮಾಡಿದ್ದ ಕಾಂಗ್ರೆಸ್ ರೈತ ಮೋರ್ಚಾ ಮುಖಂಡ ಶಿವಲಿಂಗಪ್ಪ (50) ಅವರ ಶವ ಅನುಮಾನಾಸ್ಪದವಾಗಿ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಪತ್ತೆಯಾಗಿದೆ.

ಚಿತ್ರದುರ್ಗದಲ್ಲಿ ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ಶಿವಲಿಂಗಪ್ಪ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಸ್ನೇಹಿತರು ವಿವಿಧ ಕಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸೋದರ ಅಳಿಯ ಬಸವರಾಜ್ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪೊಲೀಸ್ ಮೂಲಗಳ ಪ್ರಕಾರ, ಕಳೆದ ಮಂಗಳವಾರ ಬೆಳಿಗ್ಗೆ 11ರಿಂದ ಸಂಜೆ 7ರವರೆಗೆ ಮಹೇಶ್ವರಿ ಲೇಔಟ್ ಪ್ರದೇಶದಲ್ಲಿ ಶಿವಲಿಂಗಪ್ಪ ಅವರ ಮೊಬೈಲ್ ಲೊಕೇಶನ್ ಕಾಣಿಸಿಕೊಂಡಿತ್ತು. ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದ ಸ್ಥಳದ ಸಮೀಪದಲ್ಲೇ ಇದೀಗ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಶವ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿದ್ದು, ಮುಖ ಗುರುತು ಸಿಗದಂತಾಗಿತ್ತು ಎಂದು ತಿಳಿದುಬಂದಿದೆ. ಶವವನ್ನು ಗುರುತಿಸಿದ ಬಳಿಕ ಕುಟುಂಬಸ್ಥರು ಇದು ಕೊಲೆ ಆಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರಕರಣವನ್ನು ಸೂಕ್ತವಾಗಿ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!