ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಬುಧವಾರ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅಸ್ವಸ್ಥರಾಗಿದ್ದಾರೆ.
ಕಾರ್ಯಕ್ರಮದ ವೇಳೆ ಮಾತನಾಡುತ್ತಿದ್ದಾಗ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ ವೈದ್ಯರ ಮಾಹಿತಿ ಪ್ರಕಾರ, ದೇಹದಲ್ಲಿ ಶುಗರ್ ಮಟ್ಟ ಕಡಿಮೆಯಾದ ಕಾರಣ ಅವರು ಅಸ್ವಸ್ಥರಾಗಿದ್ದರು, ಆದರೆ ಈಗ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.
ಸ್ಪೀಕರ್ ಯುಟಿ ಖಾದರ್ ಹೇಳಿದ್ದೇನು?
ಪಿಜಿಆರ್ ಸಿಂಧ್ಯಾಗೆ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಅಭಿನಂದನಾ ಕಾರ್ಯಕ್ರಮವಿತ್ತು, ಈ ವೇಳೆ ಮಾತನಾಡುತ್ತಿದ್ದಾಗ ನಿವೃತ್ತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ಅವರಿಗೆ ವಾಮಿಟ್ ಆಯ್ತು, ಮನೆಗೆ ಹೋಗಬೇಕು ಅಂತಾ ಸ್ಟೇಜ್ಯಿಂದ ಹೊರಟಾಗ ಕುಸಿದು ಬಿದ್ದರು.
ಈ ವೇಳೆ ಸ್ಥಳದಲ್ಲಿ ಆಂಬುಲೆನ್ಸ್ ಇರಲಿಲ್ಲ, ನನ್ನ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸದ್ಯ ಆಸ್ಪತ್ರೆಯಲ್ಲಿ ಸಂತೋಷ್ ಹೆಗ್ಡೆ ಅವರು ಆರಾಮಾಗಿ ಇದ್ದಾರೆ. ಸಂತೋಷ್ ಹೆಗ್ಡೆ ಕುಟುಂಬಸ್ಥರು ಆಸ್ಪತ್ರೆಗೆ ಬಂದಿದ್ದಾರೆ. ಯಾವುದೇ ತೊಂದರೆಯಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.



