ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕೊಳಗಿಬೀಸ್ ಬಳಿ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ಹೋಗುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಇಬ್ಬರೂ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.



