HomeIndia Newsಏಕರೂಪ ನಾಗರಿಕ ಸಂಹಿತೆ ಜಾರಿ ಆದ್ರೆ, ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ- ಅಮಿತ್ ಶಾ!

ಏಕರೂಪ ನಾಗರಿಕ ಸಂಹಿತೆ ಜಾರಿ ಆದ್ರೆ, ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ- ಅಮಿತ್ ಶಾ!

For Dai;y Updates Join Our whatsapp Group

Spread the love

ದಿಸ್ಪುರ:- ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ದುಧ್‌ನೋಯ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುತ್ತೇವೆ. ಇದರಿಂದ ನುಸುಳುಕೋರರು 4 ಬಾರಿ ಮದುವೆಯಾಗಲು ಸಾಧ್ಯವಾಗಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಬುಡಕಟ್ಟು ಅಭಿವೃದ್ಧಿಗಾಗಿ ಸಮಗ್ರ ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದಾರೆ. ಇದರ ಸಂಪೂರ್ಣ ಅನುಷ್ಠಾನವು ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದರ ಮೇಲೆ ಅವಲಂಬಿತವಾಗಿದೆ ಎಂದಿದ್ದಾರೆ.

ಪ್ರಧಾನಿ ಮತ್ತು ಅಸ್ಸಾಂ ಮುಖ್ಯಮಂತ್ರಿ ಬುಡಕಟ್ಟು ಜನಾಂಗದವರ ಅಭಿವೃದ್ಧಿಗಾಗಿ ಒಂದು ಮಾರ್ಗಸೂಚಿಯನ್ನು ಸಿದ್ಧಪಡಿಸಿದ್ದಾರೆ. ಅದನ್ನು ಮುಂದಕ್ಕೆ ತೆಗೆದುಕೊಂಡು ಹೋಗಿ ಜಾರಿಗೆ ತರಲು ಬಿಜೆಪಿಗೆ ಮತ ಹಾಕಿ ಎಂದು ಜನತೆಗೆ ಮನವಿ ಮಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!