HomePolitics Newsಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಕಾಗೇರಿ

For Dai;y Updates Join Our whatsapp Group

Spread the love

ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ದೊಡ್ಡ ಸಮಸ್ಯೆಗಳು ಉಂಟಾಗಿಲ್ಲವೆಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, “ಲಘು ಮಟ್ಟದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿರಬಹುದು, ಆದರೆ ಅದನ್ನು ಹೊರತುಪಡಿಸಿದರೆ ದೇಶಕ್ಕೆ ದೊಡ್ಡ ತೊಂದರೆ ಆಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ” ಎಂದು ಹೇಳಿದರು.

ರಾಜ್ಯ ರಾಜಕೀಯ ಕುರಿತು ಮಾತನಾಡಿದ ಕಾಗೇರಿ, ಮುಂಬರುವ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಆಡಳಿತದಿಂದ ಜನ ಬೇಸತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ” ಎಂದು ಆರೋಪಿಸಿದರು.

ಇನ್ನೂ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಸಚಿವರು ತಮ್ಮ ಇತಿಮಿತಿಯಲ್ಲಿ ಮಾತನಾಡಬೇಕು. ತಮ್ಮ ಇಲಾಖೆಯ ಸಾಧನೆ ಬಗ್ಗೆ ಹೇಳುವುದಿಲ್ಲ, ಬದಲಿಗೆ ಪ್ರಧಾನಿ ಮೋದಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಮಾತ್ರ ಮಾತನಾಡುತ್ತಾರೆ” ಎಂದು ಟೀಕಿಸಿದರು. ಜೊತೆಗೆ ಕಲಬುರಗಿಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಸಲಹೆ ನೀಡಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!