ಕೊಪ್ಪಳ: ರಾಜ್ಯದಲ್ಲಿ ಆಟೋ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳು ಯುದ್ಧದ ಹಿನ್ನೆಲೆ ಉಂಟಾಗಿರುವವು, ಇದು ಯಾರೂ ಬಯಸಿದ ಪರಿಸ್ಥಿತಿ ಅಲ್ಲ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದ್ದಾರೆ.
ಕೊಪ್ಪಳ ತಾಲೂಕಿನ ಹಿಟ್ನಾಳ್ ಟೋಲ್ ಗೇಟ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂತಹ ಸಂದರ್ಭಗಳಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು ಸರ್ಕಾರಗಳ ಕರ್ತವ್ಯ ಎಂದು ಹೇಳಿದರು.
ಪ್ರಧಾನಿ ಮೋದಿ ನೇತೃತ್ವದಲ್ಲಿ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಕೆಲವು ಮಟ್ಟಿಗೆ ಯಶಸ್ಸು ಸಾಧಿಸಲಾಗಿದೆ ಎಂದರು. ಇದೇ ವೇಳೆ ಕಾಂಗ್ರೆಸ್ ವಿರುದ್ಧ ಟೀಕೆ ನಡೆಸಿದ ಅವರು, ಯುಪಿಎ ಸರ್ಕಾರ ಇದ್ದರೆ ಏನು ಮಾಡುತ್ತಿತ್ತು ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರವನ್ನು ಟೀಕಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟ ಅವರು, ರಾಜ್ಯದಲ್ಲಿ ಸಿಲಿಂಡರ್ ಮತ್ತು ಆಟೋ ಎಲ್‌ಪಿಜಿ ಕೊರತೆ ಕಾಣಿಸುತ್ತಿದೆ ಎಂದರು.
ಇದೇ ವೇಳೆ, ಆಟೋ ಚಾಲಕರ ಮೇಲೆ ತೆರಿಗೆ ವಿಧಿಸಿರುವುದನ್ನು ಉಲ್ಲೇಖಿಸಿ, ಆಟೋ ಚಾಲಕರು ತಿಂಗಳಿಗೆ ₹15,000 ನೆರವು ನೀಡುವಂತೆ ಆಗ್ರಹಿಸುತ್ತಿದ್ದಾರೆ. ಸರ್ಕಾರ ಇದನ್ನು ಪರಿಗಣಿಸಿ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.



