ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 163 ರನ್ ಟಾರ್ಗೆಟ್ ನೀಡಿತು. ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 4 ವಿಕೆಟ್ ನಷ್ಟಕ್ಕೆ 164 ರನ್ ಗಳಿಸುವ ಮೂಲಕ ಜಯ ಗಳಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಎಲ್ ರಾಹುಲ್ ಎರಡನೇ ಪಂದ್ಯದಲ್ಲೂ ನಿರಾಸೆ ಮೂಡಿಸಿದರು. ಕೇವಲ 1 ರನ್ ಗಳಿಸಿ ಔಟಾದರು. ನಿತೀಶ್ ರಾಣಾ ರನೌಟ್ ಆದರು. ಕೇವಲ 7 ರನ್‌ಗಳಿಗೆ ಎರಡು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ತಂಡ ಆಘಾತಕ್ಕೊಳಗಾಗಿತ್ತು. ಈ ವೇಳೆ, ಪಾತುಮ್ ನಿಸ್ಸಾಂಕ 30 ಎಸೆತಗಳಿಗೆ 4 ಬೌಂಡರಿ ಹಾಗೂ ಒಂದು ಸಿಕ್ಸ್ ಬಾರಿಸಿ ಒಟ್ಟು 44 ರನ್ ಕಲೆಹಾಕಿ, ತಂಡಕ್ಕೆ ಚೇತರಿಗೆ ನೀಡಿತು. ಸಮೀರ್ ರಿಜ್ವಿ 51 ಬಾಲ್‌ಗೆ 90 ರನ್ ಗಳಿಸಿ (7 ಫೋರ್ ಮತ್ತು 7 ಸಿಕ್ಸರ್) ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.



