ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಘೋರ ದುರಂತ ಸಂಭವಿಸಿದ್ದು, ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ನಡೆದಿದೆ.
ರಬೀಯಾ ದೊಡ್ಡಮನಿ (2) ಮೃತ ಮಗು ಎಂದು ಗುರುತಿಸಲಾಗಿದೆ. ಮನೆಯ ಮುಂದೆ ನಿಂತಿದ್ದ ಮಗುವಿನ ಮೇಲೆ ಏಕಾಏಕಿ ಟ್ರ್ಯಾಕ್ಟರ್ ಹರಿದು ಸಾವನ್ನಪ್ಪಿದೆ. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.



