ಮದುವೆಯಿಂದ ವಾಪಸ್ ವೇಳೆ ದುರಂತ – ಓರ್ವನಿಗೆ ಗಂಭೀರ ಗಾಯ
ಗದಗ: ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದ ಬಳಿ ಬೈಕ್ ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ನವೀನ್ (21) ಮತ್ತು ಶೋಭಾ (21) ಎಂದು ಗುರುತಿಸಲಾಗಿದ್ದು, ಇವರು ಗೊಗೇರಿ ಗ್ರಾಮದ ನಿವಾಸಿಗಳಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಅಭಿಷೇಕ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಒಂದೇ ಬೈಕ್‌ನಲ್ಲಿ ಮೂವರು ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.



