ಬೆಂಗಳೂರು: ಟಾಟಾ ಐಪಿಎಲ್ ಪಂದ್ಯಗಳ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, 11 ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಸಂಬಂಧ ಈಗಾಗಲೇ 7 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಬಂಧಿತರಿಂದ ಸುಮಾರು ₹4 ಲಕ್ಷ 53 ಸಾವಿರ ಮೌಲ್ಯದ 28 ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ 7 ಮೊಬೈಲ್ ಫೋನ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಟಿಕೆಟ್ಗಳನ್ನು ಅಕ್ರಮವಾಗಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಆರೋಪಿಗಳು, ಅಭಿಮಾನಿಗಳನ್ನು ಮೋಸಗೊಳಿಸುತ್ತಿದ್ದರೆಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಕುರಿತು ಕಬ್ಬನ್ ಪಾರ್ಕ್ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.



